varthabharthi


ಕರ್ನಾಟಕ

ಬಿಜೆಪಿ ಸೇರುವುದಾಗಿ ಘೋಷಿಸಿದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ

ವಾರ್ತಾ ಭಾರತಿ : 19 Mar, 2023

ಎಲ್.ಆರ್.ಶಿವರಾಮೇಗೌಡ

ಬೆಂಗಳೂರು: ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. 

ರವಿವಾರ ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಮಾತನಾಡಿದ ಅವರು,  'ನಾಗಮಂಗಲದಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಸೋಲಿಸುವ ಅವಕಾಶ ಇರುವುದು ನನಗೊಬ್ಬನಿಗೆ ಮಾತ್ರ. ನಾಗಮಂಗಲ ಬಿಜೆಪಿಯಿಂದ ದೂರ ಉಳಿದಿತ್ತು. ನಾಗಮಂಗಲಕ್ಕೆ ಬಿಜೆಪಿ ಅತ್ಯಗತ್ಯವಾಗಿ ಬೇಕು.  ಕ್ಷೇತ್ರದಲ್ಲಿ ನನಗೆ ನನ್ನದೇ ಆದಂತಹ ಮತಗಳು ಇವೆ. ಮಂಡ್ಯದಲ್ಲಿ 7 ಕ್ಕೆ 7 ಸೀಟು ಗೆಲ್ಲಿಸಲು ಪಣ ತೊಡುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಂಸದ ಜಿ ಮಾದೇಗೌಡರ ವಿರುದ್ಧ ಲಘುವಾಗಿ ಮಾತನಾಡಿದರೆಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶಿವರಾಮೇಗೌಡ ಅವರನ್ನು  ಪಕ್ಷದಿಂದ ಉಚ್ಚಾಟನೆಗೊಳಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)