ಕರ್ನಾಟಕ
''ಶೀಘ್ರದಲ್ಲೇ ಒಂದು ತೀರ್ಮಾನಕ್ಕೆ ಬರುತ್ತೇನೆ...''
ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ: ಬಿಜೆಪಿ MLC ಲಕ್ಷ್ಮಣ ಸವದಿ

ಲಕ್ಷ್ಮಣ ಸವದಿ- ಫೈಲ್ ಚಿತ್ರ
ಬೆಳಗಾವಿ: 'ಅಥಣಿ ಮತಕ್ಷೇತ್ರದ ವಿವಿಧ ಸಮುದಾಯಗಳ ಮುಖಂಡರನ್ನು ಕೇಳಿ ಚುನಾವಣೆಗೆ ಹೋಗುವುದು ಸೂಕ್ತ ಎಂದೆನಿಸಿದೆ. ಹೀಗಾಗಿ ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ವರಿಷ್ಠರಿಗೆ ಟಿಕೆಟ್ ಕೇಳುತ್ತೇನೆ' ಎಂದು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದ್ದಾರೆ.
ಶನಿವಾರ ಪಟ್ಟಣದ ನೂರಾನಿ ಹಾಲ್‌ನಲ್ಲಿ ಮುಸ್ಲಿಮ್ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ''ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಹೀಗಾಗಿ, ನಾನು ಮಾರ್ಚ್ 27ರಂದು ಎಲ್ಲ ಸಮುದಾಯದವರ ಒಪ್ಪಿಗೆ ಪಡೆದು ಒಂದು ತೀರ್ಮಾನಕ್ಕೆ ಬರುತ್ತಿದ್ದೇನೆ. ಮುಸ್ಲಿಮ್ ಸಮಾಜದವರು ನನ್ನ ಹೃದಯದಲ್ಲಿ ಅಚ್ಚೊತ್ತಿದ್ದಾರೆ. ನನ್ನ ರಾಜಕೀಯ ಭವಿಷ್ಯಕ್ಕೆ ನಿಮ್ಮ ಅಭಿಪ್ರಾಯವೂ ಮುಖ್ಯ. ನೀವು ನನಗೆ ಯಾವಾಗಲೂ ಬೆಂಬಲವಾಗಿ ನಿಲ್ಲಬೇಕು'' ಎಂದರು.
''ನನಗೀಗ ಮಾಡು ಇಲ್ಲವೇ ಮಡಿ ಎಂಬ ಸ್ಥಿತಿ ಇದೆ. ಅಥಣಿ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಲೇಬೇಕು ಎಂದು ಸಮಾಜದವರು ಹೇಳಿದರೆ ಮಾತ್ರ ನಾನು ಟಿಕೆಟ್ ಕೇಳುತ್ತೇನೆ'' ಎಂದರು.
ಇದನ್ನೂ ಓದಿ: ಅಥಣಿ ಬಿಟ್ಟುಕೊಡಲ್ಲ, ಮಹೇಶ್ ಕುಮಟಳ್ಳಿಗೆ ರಮೇಶ್ ಗೋಕಾಕ್ ಬಿಟ್ಟು ಕೊಡಲಿ: ಲಕ್ಷ್ಮಣ್ ಸವದಿ ಪುತ್ರ ತಿರುಗೇಟು

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ