ಜೈಲು ಶಿಕ್ಷೆಗೆ ಗುರಿಯಾಗಿದ್ದ ಬಿಜೆಪಿಯ ಇಬ್ಬರು ಶಾಸಕರನ್ನು ಅನರ್ಹಗೊಳಿಸಿಲ್ಲ ಏಕೆ: ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಕಾಂಗ್ರೆಸ್ ಸೇರಿದಂತೆ ಹಲವು ಸಾಮಾಜಿಕ ಚಿಂತಕರಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ''ಕರ್ನಾಟಕದಲ್ಲಿ ವಂಚಕ ಬಿಜೆಪಿಯ ಇಬ್ಬರು ಶಾಸಕರಿಗೆ ಜೈಲು ಶಿಕ್ಷೆಯಾಗಿತ್ತು, ಆದರೂ ಸ್ಪೀಕರ್ ಅವರನ್ನು ಅನರ್ಹಗೊಳಿಸಿರಲಿಲ್ಲ. ಬಿಜೆಪಿಯವರು ನಿಯಮ, ಕಾನೂನುಗಳಿಗೆ ಅತೀತರೇ? ಇಷ್ಟು ದಿನಗಳವೆರೆಗೆ ಇವರನ್ನು ಅನರ್ಹಗೊಳಿಸದಿದ್ದಿದ್ದು ಏಕೆ? ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿಯ ಅಂತ್ಯಕಾಲ ಆರಂಭಗೊಳ್ಳುತ್ತಿದೆ'' ಎಂದು ಕಿಡಿಕಾರಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಫೆಬ್ರವರಿ 14ರಂದು ಜನಪ್ರತಿನಿಧಿಗಳ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ಅದೇ ದಿನ ಮತ್ತೋರ್ವ ಬಿಜೆಪಿ ಶಾಸಕ ನೆಹರೂ ಓಲೇಕಾರ್ ಅವರಿಗೆ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿತ್ತು.
ಕರ್ನಾಟಕದಲ್ಲಿ ವಂಚಕ ಬಿಜೆಪಿಯ ಇಬ್ಬರು ಶಾಸಕರಿಗೆ ಜೈಲು ಶಿಕ್ಷೆಯಾಗಿತ್ತು,
— Karnataka Congress (@INCKarnataka) March 24, 2023
ಆದರೂ ಸ್ಪೀಕರ್ ಅವರನ್ನು ಅನರ್ಹಗೊಳಿಸಿರಲಿಲ್ಲ.
ಬಿಜೆಪಿಯವರು ನಿಯಮ, ಕಾನೂನುಗಳಿಗೆ ಅತೀತರೇ?
ಇಷ್ಟು ದಿನಗಳವೆರೆಗೆ ಇವರನ್ನು ಅನರ್ಹಗೊಳಿಸದಿದ್ದಿದ್ದು ಏಕೆ?
ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿಯ ಅಂತ್ಯಕಾಲ ಆರಂಭಗೊಳ್ಳುತ್ತಿದೆ. pic.twitter.com/LDVdRY0mmh