ಕರ್ನಾಟಕ
ಮಡಿಕೇರಿ: ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು
ವಾರ್ತಾ ಭಾರತಿ : 26 Mar, 2023

ಡಾ. ಬಲ್ಯಂಡ ಬೀನಾ
ಮಡಿಕೇರಿ: ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗದ ಮರೂರು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್‍ಸಿಸಿ ಅಧಿಕಾರಿಯಾಗಿದ್ದ ಡಾ. ಬಲ್ಯಂಡ ಬೀನಾ (52) ಮೃತಪಟ್ಟವರು.
ಡಾ. ಬಲ್ಯಂಡ ಬೀನಾ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದರು. ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಾವನ್ನಪ್ಪಿದ್ದಾರೆ.
ಮೃತರು ಪತಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)