varthabharthi


ರಾಷ್ಟ್ರೀಯ

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ; ಮತ್ತಿಬ್ಬರು ಸಾವು, ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ವಾರ್ತಾ ಭಾರತಿ : 26 Mar, 2023

Photo: ANI

ಚೆನ್ನೈ, ಮಾ. 23: ತಮಿಳುನಾಡಿನ ಕಾಂಚಿಪುರಂನಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಗಾಯಗೊಂಡವರಲ್ಲಿ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಮೃತಪಟ್ಟವರನ್ನು ಗಜೇಂದ್ರನ್ (50) ಹಾಗೂ ಜಗದೀಶ್ (35) ಎಂದು ಗುರುತಿಸಲಾಗಿದೆ. ಇಬ್ಬರೂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಕಾಂಚಿಪುರಂನ ವಲತೋಟ್ಟಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ  ಮಾರ್ಚ್ 22ರಂದು ಸ್ಫೋಟ ಸಂಭವಿಸಿತ್ತು.
ಘಟನೆ ಸಂಭವಿಸಿದ ಬಳಿಕ ಕಾರ್ಖಾನೆಯ ಮಾಲಿಕ ನರೇಂದ್ರನ್ ಪೊಲೀಸರ ಮುಂದೆ ಶರಣಾಗತನಾಗಿದ್ದ. ಪ್ರಸಕ್ತ ಈತ ನ್ಯಾಯಾಂಗ ಬಂಧನದಲ್ಲಿ ಇದ್ದಾನೆ.

ಈ ಘಟನೆಯಲ್ಲಿ ಗಾಯಗೊಂಡ ಕನಿಷ್ಠ 23 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)