varthabharthi


ಬೆಂಗಳೂರು

ಮಾಡಾಳ್ ವಿರೂಪಾಕ್ಷಪ್ಪರ ಬಂಧನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕಿರುವ ಆಸ್ಕರ್ ಅವಾರ್ಡ್: ಕಾಂಗ್ರೆಸ್ ಲೇವಡಿ

ವಾರ್ತಾ ಭಾರತಿ : 27 Mar, 2023

ಬೆಂಗಳೂರು, ಮಾ.27: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ  ಬಂಧನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕಿರುವ ಆಸ್ಕರ್ ಅವಾರ್ಡಿನಂತೆ ಎಂದು ವಿಪಕ್ಷ ಕಾಂಗ್ರೆಸ್ ಲೇವಡಿ ಮಾಡಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಗ್ರೆಸ್,  ''#40percentsarkara ಭ್ರಷ್ಟರ ರಕ್ಷಣೆಯ ಪ್ರಯತ್ನದ ಹೊರತಾಗಿಯೂ ಈ ಬಂಧನವಾಗಿದ್ದು ಬಿಜೆಪಿಯ ಭ್ರಷ್ಟಾಚಾರದ ಪಾಪದ ಕೊಡ ತುಂಬಿರುವುದಕ್ಕೆ ಸಾಕ್ಷಿ. ಇಂಥಹ ಕಡುಭ್ರಷ್ಟ ಬಿಜೆಪಿಗೆ ಮತ ಕೇಳಲು ಜನರ ಮುಂದೆ ಹೋಗಲು ಯಾವುದೇ ನೈತಿಕ ಹಕ್ಕೂ ಇಲ್ಲ'' ಎಂದು ಕಾಂಗ್ರೆಸ್ ಟೀಕಿಸಿದೆ. 

ಪ್ರಕರಣದ ಹಿನ್ನೆಲೆ?: ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರರೂ ಆದ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್‍ಡಿಎಲ್) ಕಚ್ಚಾ ತೈಲ ಪೂರೈಸುವ ಗುತ್ತಿಗೆಯ  ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ನಡುವೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿಸಿ ಎಫ್‍ಐಆರ್ ದಾಖಲಿಸಿದ್ದರು. ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 7 (ಎ) ಮತ್ತು (ಬಿ), 7 ಎ, 8, 9 ಮತ್ತು 10ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.  

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)