ಚುನಾವಣೆ ನೀತಿ ಸಂಹಿತೆ ಜಾರಿ ಸಾಧ್ಯತೆ: ಸಿಎಂ ಅಧಿಕೃತ ಕಾರ್ಯಕ್ರಮಗಳು ದಿಢೀರ್ ರದ್ದು
ಬೆಂಗಳೂರು,ಮಾ.29: ಭಾರತೀಯ ಚುನಾವಣಾ ಆಯೋಗವು ಇಂದು ಪತ್ರಿಕಾಗೋಷ್ಠಿ ಕರೆದಿರುವ ಹಿನ್ನೆಲೆಯಲ್ಲಿ ಇಂದು ಆಯೋಜನೆಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯಕ್ರಮ ದಿಢೀರ್ ರದ್ದುಗೊಳಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಬುಧವಾರ) ಕೈಗೊಳ್ಳಲು ಉದ್ದೇಶಿಸಲಾಗಿದ್ದ ಕೊಪ್ಪಳ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದಾಗಿ ರದ್ದುಪಡಿಸಿರುತ್ತಾರೆಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ. ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.
Next Story