ಮೀಸಲಾತಿ ವಿಚಾರದಲ್ಲಿ ಮುಸ್ಲಿಮರಿಗೆ ನಾವು ಅನ್ಯಾಯ ಮಾಡಿಲ್ಲ: ಬಿ.ಎಸ್ ಯಡಿಯೂರಪ್ಪ
ಬೆಂಗಳೂರು: ''ಮೀಸಲಾತಿ ವಿಚಾರದಲ್ಲಿ ಮುಸ್ಲಿಮರಿಗೆ ನಾವು (ಬಿಜೆಪಿ) ಅನ್ಯಾಯ ಮಾಡಿಲ್ಲ. EWS ಅಡಿಯಲ್ಲಿ ಅವರಿಗೆ ಮೀಸಲಾತಿ ಕಲ್ಪಿಸಲಾಗಿದೆ'' ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗುರುವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮೀಸಲಾತಿ ವಿಚಾರದಲ್ಲಿ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸಲಾಗಿದೆ. ಒಳಮೀಸಲಾತಿ ವಿಚಾರದಲ್ಲಿ ಬಂಜಾರ ಸಮುದಾಯ ತಪ್ಪು ಗ್ರಹಿಕೆಯಿಂದ ಕಲ್ಲುತೂರಾಟ ಪ್ರಕರಣ ನಡೆದಿದೆ. ಬಂಜಾರ ಸಮುದಾಯವನ್ನು ಮನವೊಲಿಸುವ ಕೆಲಸ ಮಾಡುತ್ತೇನೆ' ಎಂದರು.
'ಎರಡ್ಮೂರು ದಿನಗಳಲ್ಲಿ ನಾನು ರಾಜ್ಯ ಪ್ರವಾಸ ಆರಂಭಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. 130 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮುಸ್ಲಿಮ್ ಸಮುದಾಯದ 2ಬಿ ಮೀಸಲಾತಿ ರದ್ದು: ಅನುಮಾನಕ್ಕೆ ಎಡೆಮಾಡಿದ ಸರಕಾರಿ ಆದೇಶ