ಯಾವುದೇ ಕಾರಣಕ್ಕೂ ವರುಣಾದಿಂದ ಸ್ಪರ್ಧೆ ಇಲ್ಲ: ವಿಜಯೇಂದ್ರ ಸ್ಪರ್ಧೆ ಗೊಂದಲಕ್ಕೆ ಬಿಎಸ್‌ವೈ ತೆರೆ
ಮೈಸೂರು: ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಎಸ್‌ವೈ ಪುತ್ರ ಬಿವೈ ವಿಜಯೇಂದ್ರ (B.Y. Vijayendra) ಸ್ಪರ್ಧಿಸುತ್ತಾರೆ ಎನ್ನುವ ಊಹಾಪೋಹಕ್ಕೆ ಬಿ.ಎಸ್. ಯಡಿಯೂರಪ್ಪ (B.S. Yediyurappa) ತೆರೆ ಎಳೆದಿದ್ದಾರೆ. ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಎಸ್‌ವೈ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಬಿಎಸ್‌ವೈ, ವರುಣಾದಲ್ಲಿ ವಿಜಯೇಂದ್ರ ನಿಲ್ಲಬೇಕು ಎಂಬ ಒತ್ತಡ ಇದ್ದರೂ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಬೇಕು ಅಂತ ಹೇಳಿದ್ದೀನಿ ಎಂದು ತಿಳಿಸಿದ್ದಾರೆ.
ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿವೈ ವಿಜಯೇಂದ್ರ ಹೆಸರು ಕೇಳಿ ಬರುತ್ತಿದ್ದ ನಡುವೆ ಮೈಸೂರಿಗೆ ಬಿಎಸ್‌ವೈ ಭೇಟಿ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧಿಸುವುದಾಗಿ ಬಿಎಸ್‌ವೈ ಸ್ಪಷ್ಟಪಡಿಸಿದ್ದಾರೆ.
Next Story