ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ಬಿಜೆಪಿ ಸೇರ್ಪಡೆ
ಬೆಂಗಳೂರು, ಎ.5: ಮಂಡ್ಯದ ಮಾಜಿ ಸಂಸದ ಹಾಗೂ ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿದ್ದ ಎಲ್.ಆರ್.ಶಿವರಾಮೇ ಗೌಡ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾದರು.
ನಗರದ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್.ಆರ್. ಶಿವರಾಮೇಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಬಾವುಟ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಇದೇ ವೇಳೆ ಯೋಗೇಶ್ ಬೆಸ್ತದ್, ರಾಮಪ್ಪ, ಶ್ರೀ ಮಂಜು ಹಾಗೂ ಎಲ್.ಆರ್. ಶಿವರಾಮೇಗೌಡ ಅವರ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಗೊಂಡರು.
ಈ ಹಿಂದೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‍ನಲ್ಲಿದ್ದ ಅವರು ಶಾಸಕರಾಗಿ ಹಾಗೂ ಒಂದು ಬಾರಿ ಮಂಡ್ಯ ಲೋಕಸಭಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಂಡ್ಯದ ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರ ವಿರುದ್ಧ ಲಘುವಾಗಿ ಮಾತನಾಡಿದರೆಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶಿವರಾಮೇಗೌಡ ಅವರನ್ನು ಪಕ್ಷದಿಂದ ಉಚ್ಚಾಟನೆಗೊಳಿಸಿದ್ದರು.
Next Story