ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ: ಅರ್ಜಿ ಅಹ್ವಾನ
ಉಡುಪಿ, ಎ.19: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೇಸಿಗೆ ಶಿಬಿರವು ನಗರದ ಬ್ರಹ್ಮಗಿರಿ ಜಿಲ್ಲಾ ಬಾಲಭವನದಲ್ಲಿ ಎಪ್ರಿಲ್ 30ರಿಂದ 15 ದಿನಗಳ ಕಾಲ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಅರ್ಹ ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 3:30ರವರೆಗೆ ಶಿಬಿರವು ನಡೆಯಲಿದ್ದು, ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ವಾಲ್ ಆರ್ಟ್, ಕರಕುಶಲ ಕಲೆ, ಪಿಒಪಿ ಹೂದಾನಿ, ಸಮೂಹ ನೃತ್ಯ, ಸಂಗೀತ, ಕರಾಟೆ, ಭಾಷಣ, ಕೌಶಲ್ಯ ತರಬೇತಿ ಮುಂತಾದ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ತರಬೇತಿ ನೀಡಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು, ಜಿಲ್ಲಾ ಬಾಲಭವನ, ಬ್ರಹ್ಮಗಿರಿ, ಉಡುಪಿ ಮೊ.ನಂ: 8296249087, 7619200153ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story