ಗಾಂಧಿ ನಗರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ
ಬೆಂಗಳೂರು, ಎ.24: ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ನಿಶ್ಚಿತ. ನನ್ನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹೇಳಿದರು.
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ತೊರೆಯುವ ಬಗ್ಗೆ ನಾನು ಯಾವುದೆ ಆಲೋಚನೆ ಮಾಡಿಲ್ಲ. ಈ ಕ್ಷೇತ್ರದಲ್ಲಿ ನಾನು ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ಇಲ್ಲಿನ ಕಾರ್ಯಕರ್ತರು ನನ್ನ ಪರವಾಗಿದ್ದರೂ, ಬಿಜೆಪಿ ಟಿಕೆಟ್ ತಪ್ಪಿದ್ದು ಯಾಕೆ ಎಂದು ಗೊತ್ತಾಗುತ್ತಿಲ್ಲ ಎಂದರು.
ಇದೇ ವೇಳೆ ಸಂಸದ ಪಿ.ಸಿ.ಮೋಹನ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಲ್ಲಿನ ಸಂಸದರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ. ಅವರಿಂದಾಗಿಯೆ ನನಗೆ ಟಿಕೆಟ್ ತಪ್ಪಿದೆ. ಯಾರೆ ಒತ್ತಾಯ ಮಾಡಿದರು ನಾಮಪತ್ರವನ್ನು ನಾನು ವಾಪಸ್ ಪಡೆದಿಲ್ಲ ಎಂದು ಅವರು ಹೇಳಿದರು.
Next Story