ತಮಿಳುನಾಡು: ವಿಷಪೂರಿತ ಮದ್ಯ ಸೇವಿಸಿ ಎಂಟು ಮಂದಿ ಸಾವು
ಚೆನ್ನೈ: ತಮಿಳುನಾಡಿನಲ್ಲಿ ವಿಷಪೂರಿತ ಮದ್ಯ ಸೇವಿಸಿ ಎಂಟು ಮಂದಿ ಮೃತಪಟ್ಟಿರುವ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿವೆ. ವಿಳ್ಳುಪುರಂ ಜಿಲ್ಲೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, ಇತರ ನಾಲ್ವರು ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ ಅಸು ನೀಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಅಸ್ವಸ್ಥಗೊಂಡಿರುವ 30ಕ್ಕೂ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ರಮ ಮದ್ಯ ಪೂರೈಕೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಶೋಧ ಕಾರ್ಯಾಚರಣೆ ನಡೆಸುತ್ತಿರುವ ವಿಶೇಷ ತಂಡ ಹೇಳಿದೆ.
ಘಟನೆಬೆ ಸಂಬಂಧಿಸಿದಂತೆ ಇನ್‌ಸ್ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಉತ್ತರ ವಲಯ ಐಜಿ ಕಣ್ಣನ್ ಸ್ಪಷ್ಟಪಡಿಸಿದ್ದಾರೆ.
ಅಕ್ರಮ ಮದ್ಯದ ಜತೆ ಬೆರೆಸಿದ್ದ ಕೈಗಾರಿಕಾ ಮೆಥೆನಾಲ್ ಸೇವಿಸಿದ್ದರಿಂದ ಈ ದುರಂತ ಸಂಭವಿಸಿರಬೇಕು ಎಂದು ಹಿರಿಯ ಅಧಿಕಾರಿಗಳ ಅಂದಾಜಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಹಾಗೂ ಅಸ್ವಸ್ಥರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಂ.ಕೆ.ಸ್ವಾಲಿನ್ ಘೋಷಿಸಿದ್ದಾರೆ.