ಮೊದಲ ಸಂಪುಟ ಸಭೆಯಲ್ಲಿ ನಾವು ನೀಡಿರುವ 5 ಭರವಸೆಗಳನ್ನು ಈಡೇರಿಸುತ್ತೇವೆ: ರಾಹುಲ್ ಗಾಂಧಿ
ಬೆಂಗಳೂರು: ಮೊದಲ ಸಂಪುಟ ಸಭೆಯಲ್ಲಿ ನಾವು ನೀಡಿರುವ 5 ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನೂತನವಾಗಿ ಚುನಾಯಿತ ಕರ್ನಾಟಕ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಜನರನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ನಾವು ನಿಮಗೆ 5 ಭರವಸೆಗಳನ್ನು ನೀಡಿದ್ದೇವೆ, ನಾವು ಸುಳ್ಳು ಭರವಸೆಗಳನ್ನು ನೀಡುವುದಿಲ್ಲ, ನಾವು ಹೇಳಿದ್ದನ್ನು ಮಾಡುತ್ತೇವೆ. 1-2 ಗಂಟೆಗಳಲ್ಲಿ ಕರ್ನಾಟಕ ಸರಕಾರದ ಮೊದಲ ಕ್ಯಾಬಿನೆಟ್ ಸಭೆ ನಡೆಯಲಿದೆ. ಆ ಸಭೆಯಲ್ಲಿ ಈ 5 ಭರವಸೆಗಳು ಕಾನೂನಾಗುತ್ತವೆ ಎಂದು ಹೇಳಿದರು.
#WATCH | We made 5 promises to you. I had said we don't make false promises. We do what we say. In 1-2 hours, the first cabinet meeting of the Karnataka govt will happen and in that meeting these 5 promises will become law: Congress leader Rahul Gandhi pic.twitter.com/hhsancnayq
— ANI (@ANI) May 20, 2023
Next Story