varthabharthi


ಕರ್ನಾಟಕ

ಶಿವಮೊಗ್ಗ | ಮಹಿಳೆಗೆ ಅಶ್ಲೀಲ ಫೋಟೋ ಕಳುಹಿಸಿ ಕಿರುಕುಳ ಆರೋಪ: ಪ್ರಕರಣ ದಾಖಲು

ವಾರ್ತಾ ಭಾರತಿ : 25 May, 2023

ಶಿವಮೊಗ್ಗ, ಮೇ 25: ಸಂಬಂಧಿಕರು ಮತ್ತು ಸ್ನೇಹಿತರಿಗೆ ಮಹಿಳೆಯೊಬ್ಬರ ಅಶ್ಲೀಲ ಪೋಟೊಗಳನ್ನು ವಾಟ್ಸಪ್ ಮೂಲಕ ಕಳುಹಿಸಿ ಮಾನಸಿಕ ಹಿಂಸೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರೆ ಮಹಿಳೆ ಬೆಂಗಳೂರಿನಲ್ಲಿದ್ದ ಸಂದರ್ಭ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತ ದೂರುದಾರೆಯ ಗಮನಕ್ಕೆ ಬಾರದೆ ಆಕೆಯ ಆಶ್ಲೀಲ ಫೋಟೊಗಳನ್ನು ತೆಗೆದುಕೊಂಡಿದ್ದ. ಮಹಿಳೆ ಬೆಂಗಳೂರು ತೊರೆದು ಶಿವಮೊಗ್ಗಕ್ಕೆ ಬಂದು ನೆಲೆಸಿದ್ದು, ಇಲ್ಲಿಯೇ ಕೆಲಸ ಮಾಡುತ್ತಿದ್ದಾರೆ. ಈಚೆಗೆ ಆ ವ್ಯಕ್ತಿ ಮಹಿಳೆಗೆ ಮಾನಸಿಕ ಕಿರುಕುಳ ನೀಡಲು ಆರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಸಹೋದ್ಯೋಗಿಗಳು, ಸಂಬಂಧಿಗಳ ವಾಟ್ಸಪ್ ನಂಬರ್‌ಗೆ ಆ ವ್ಯಕ್ತಿ ಅಶ್ಲೀಲ ಚಿತ್ರಗಳನ್ನು ಕಳುಹಿಸಿದ್ದಾನೆ. ಇದರಿಂದ ನೊಂದಿರುವ ಮಹಿಳೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)