varthabharthi


ಕರ್ನಾಟಕ

ರಾಹುಲ್, ಸೋನಿಯಾರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ವಾರ್ತಾ ಭಾರತಿ : 26 May, 2023

ಹೊಸದಿಲ್ಲಿ: ರಾಜ್ಯ ಸರ್ಕಾರದ ಸಚಿವ ಸಂಪುಟ ರಚನೆ ಕಸರತ್ತು ಕೊನೆಯ ಹಂತ ತಲುಪಿದ್ದು, ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. 

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸೋನಿಯಾರನ್ನು ಭೇಟಿಯಾದ ಸಿದ್ದರಾಮಯ್ಯ ಅವರು ಕೆಲಕಾಲ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೂಡ ಇದ್ದರು. 

ಸಚಿವ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯಲು ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರೊಂದಿಗೆ ಸರಣಿ ಸಭೆ ನಡೆಸುತ್ತಿದ್ದಾರೆ. ಸಚಿವರ ಪಟ್ಟಿ ಬಹುತೇಕ ಅಂತಿಮವಾಗಿದ್ದು, ಶನಿವಾರವೇ ಸಂಪುಟ ವಿಸ್ತರಣೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)