varthabharthi


ದಕ್ಷಿಣ ಕನ್ನಡ

ಬಂಟ್ವಾಳ: ಮನೆಗೆ ಆಕಸ್ಮಿಕ ಬೆಂಕಿ; 2 ಲಕ್ಷಕ್ಕೂ ಅಧಿಕ ರೂ. ನಷ್ಟ

ವಾರ್ತಾ ಭಾರತಿ : 26 May, 2023

ಬಂಟ್ವಾಳ : ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಚೆನೈತ್ತೋಡಿ ಗ್ರಾಮದ ವಾಮದಪದವಿನಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.

ವಾಮದಪದವು ಸಮೀಪದ ಕಡ್ತಲಬೆಟ್ಟು ಕೋಡಿ ಬಾಕಿಮಾರ್ ಎಂಬಲ್ಲಿ ಸುಧಾಕರ್ ಶೆಟ್ಟಿ ಎಂಬವರ ಮನೆಗೆ ಗುರುವಾರ ಮಧ್ಯ ರಾತ್ರಿ 12.30 ರ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸುಮಾರು 2 ಲಕ್ಷಕ್ಕೂ ಅಧಿಕ ರೂ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಮನೆಯಲ್ಲಿ ಮಲಗಿದ್ದ ವರಿಗೆ ಕೂಡಲೇ ಎಚ್ಚರವಾದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)