KSRTC: ಎಪ್ರಿಲ್ ತಿಂಗಳಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 3 ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ದಂಡ
ಬೆಂಗಳೂರು, ಮೇ 27: ಎಪ್ರಿಲ್ ತಿಂಗಳಿನಲ್ಲಿ ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 3,415 ಟಿಕೆಟ್ ರಹಿತ ಪ್ರಯಾಣಿಕರಿಂದ 5,54,832 ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಲಾಗಿದೆ.
ಎಪ್ರಿಲ್ ತಿಂಗಳಿನಲ್ಲಿ 44,540 ವಾಹನಗಳನ್ನು ತನಿಖೆಗೊಳಪಡಿಸಿ, 3,070 ಪ್ರಕರಣಗಳನ್ನು ಪತ್ತೆ ಹೆಚ್ಚಿ ದಂಡವನ್ನು ವಿಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story