ತಾವು ಓದಿದ ಶಾಲೆಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಾವು ವ್ಯಾಸಂಗ ಮಾಡಿದ ಬೆಂಗಳೂರಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ( ಎನ್ ಪಿ ಎಸ್ ) ಸ್ಥಾಪಕ ಅಧ್ಯಕ್ಷ ಡಾ. ಕೆ ಪಿ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ನೂತನವಾಗಿ ಆಯ್ಕೆಯಾದ ಡಿ ಸಿ ಎಂ ಡಿಕೆ ಶಿವಕುಮಾರ್ ಅವರನ್ನು ಡಾ. ಕೆ ಪಿ ಗೋಪಾಲಕೃಷ್ಣ ಹಾಗೂ ಶಾಲಾ ಸಿಬ್ಬಂದಿ ಆತ್ಮೀಯತೆಯಿಂದ ಬರಮಾಡಿಕೊಂಡರು.
ಈ ಸಂಬಂಧ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ ಶಿವಕುಮಾರ್, 'ರಾಜಾಜಿನಗರದಲ್ಲಿರುವ NPS ಶಾಲೆಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರು ಹಾಗೂ ಶಿಕ್ಷಣ ತಜ್ಞರಾದ ಶ್ರೀ ಗೋಪಾಲಕೃಷ್ಣ ಅವರನ್ನು ಭೇಟಿಯಾದೆ. ರಾಜ್ಯದಲ್ಲಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಿದ್ದು ಈ ಸಂಬಂಧ ಗೋಪಾಲಕೃಷ್ಣ ಅವರೊಂದಿಗೆ ಚರ್ಚಿಸಿ, ಸಲಹೆಗಳನ್ನು ಪಡೆದೆ' ಎಂದು ತಿಳಿಸಿದ್ದಾರೆ.
Next Story