ಸಚಿವ ಪ್ರಿಯಾಂಕ್ ಖರ್ಗೆ ಹೆಸರಿನಲ್ಲಿ ವಂಚನೆ: ಆರೋಪಿಯ ಬಂಧನ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಹೇಳಿಕೊಂಡು ಅಮಾಯಕರನ್ನು ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪದಡಿ ಓರ್ವನನ್ನು ಇಲ್ಲಿನ ಸದಾಶಿವನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ರಘುನಾಥ್ ಬಂಧಿತ ಆರೋಪಿ, ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ.
ಪ್ರಿಯಾಂಕ್ ಖರ್ಗೆ ಆಪ್ತ ಸಹಾಯಕ ಕೇಶವ್ ಮೂರ್ತಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಅನ್ವಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನೂ, ಈತ ನಿಗಮ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕೊಡಿಸುವೆ ಎಂದು ನಂಬಿಸಿ ಜನರ ಬಳಿಯಿಂದ ಹಣ ಪಡೆಯುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.
Next Story