ಆಗಸ್ಟ್ 15ರಂದು ಗೃಹ ಲಕ್ಷ್ಮೀ ಯೋಜನೆ ಜಾರಿ; ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೂ ಅನ್ವಯ
ಜೂನ್ 15 ರಿಂದ ಅರ್ಜಿ ಸಲ್ಲಿಸಲು ಸಮಯವಕಾಶ ► ಸಿಎಂ ಸಿದ್ದರಾಮಯ್ಯ ಘೋಷಣೆ
ಜೂನ್ 15 ರಿಂದ ಅರ್ಜಿ ಸಲ್ಲಿಸಲು ಸಮಯವಕಾಶ ► ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 'ಗೃಹ ಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿ ಖಾತೆಗಳಿಗೆ 2000 ರೂ. ಜಮೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ''ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ'' ಎಂದು ಸ್ಪಷ್ಟಪಡಿಸಿದರು.
''ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ಬುಕ್ ಝೆರಾಕ್ಸ್ ನೀಡಬೇಕು'' ಎಂದು ತಿಳಿಸಿದರು.
Next Story