ಉಡುಪಿ: ಪುಷ್ಪ ಹರಾಜು ಕೇಂದ್ರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸ್ಥಳಾವಕಾಶ
ಉಡುಪಿ, ಜೂ.2: ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದಲ್ಲಿರುವ ಪುಷ್ಷ ಹರಾಜು ಕೇಂದ್ರ(ರೈತ ಸೇವಾ ಕೇಂದ್ರ) ಕಟ್ಟಡದ ಮುಂಭಾಗದ ಖಾಲಿ ಆವರಣದಲ್ಲಿ ಸಂಘಸಂಸ್ಥೆಗಳು, ಸ್ವ-ಸಹಾಯ ಸಾವಯವ ಗುಂಪುಗಳು, ನರ್ಸರಿಗಳು, ರೈತ ಸಂಘಗಳು, ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿ ಸಿದ ಕಾರ್ಯಕ್ರಮಗಳು, ವಸ್ತು ಪ್ರದರ್ಶನ, ಆಹಾರ ಮೇಳ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿಗದಿತ ಶುಲ್ಕ ಪಾವತಿಸಿ ಆಯೋಜಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊ.ಸಂ.9900910948 ಅನ್ನು ಸಂಪರ್ಕಿಸು ವಂತೆ ಜಿಲ್ಲಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ.
Next Story