Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರೀ ಅಪಘಾತಗಳ ಬಳಿಕ ನೈತಿಕ ನೆಲೆಯಲ್ಲಿ...

ಭಾರೀ ಅಪಘಾತಗಳ ಬಳಿಕ ನೈತಿಕ ನೆಲೆಯಲ್ಲಿ ರಾಜೀನಾಮೆ ನೀಡಿದ್ದ ಇಬ್ಬರು ರೈಲ್ವೆ ಸಚಿವರು

ರೈಲ್ವೆ ಸಚಿವ ಅಶ್ವಿನಿ ವೈಷ್ಣವ ರಾಜೀನಾಮೆಗೆ ಹೆಚ್ಚುತ್ತಿರುವ ಆಗ್ರಹ

3 Jun 2023 9:04 PM IST
share
ಭಾರೀ ಅಪಘಾತಗಳ ಬಳಿಕ ನೈತಿಕ ನೆಲೆಯಲ್ಲಿ ರಾಜೀನಾಮೆ ನೀಡಿದ್ದ ಇಬ್ಬರು ರೈಲ್ವೆ ಸಚಿವರು
ರೈಲ್ವೆ ಸಚಿವ ಅಶ್ವಿನಿ ವೈಷ್ಣವ ರಾಜೀನಾಮೆಗೆ ಹೆಚ್ಚುತ್ತಿರುವ ಆಗ್ರಹ

ಹೊಸದಿಲ್ಲಿ: ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಳಿ ದೇಶದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರ ರಾಜೀನಾಮೆಗೆ ಬೇಡಿಕೆಗಳು ಹೆಚ್ಚತೊಡಗಿವೆ. ನಿನ್ನೆಯ ಅಪಘಾತ ಹಲವು ವರ್ಷಗಳಲ್ಲಿ ದೇಶದಲ್ಲಿ ಸಂಭವಿಸಿದ ಅತ್ಯಂತ ವಿನಾಶಕಾರಿ ದುರಂತಗಳಲ್ಲೊಂದಾಗಿದ್ದು, ಕನಿಷ್ಠ 270 ಜನರು ಮೃತಪಟ್ಟಿದ್ದಾರೆ ಮತ್ತು ಇತರ 900 ಜನರು ಗಾಯಗೊಂಡಿದ್ದಾರೆ.

ಸರಕಾರವು ಕೇವಲ ಐಷಾರಾಮಿ ರೈಲುಗಳ ಮೇಲೆ ಗಮನವನ್ನು ಕೇಂದ್ರೀಕರಿಸುತ್ತಿದೆ ಮತ್ತು ಸಾಮಾನ್ಯ ಜನರು ಪ್ರಯಾಣಿಸುವ ರೈಲುಗಳನ್ನು ಮತ್ತು ಮಾರ್ಗಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಟ್ವಿಟರ್‌ನಲ್ಲಿ ಆರೋಪಿಸಿರುವ ಸಿಪಿಐ ಸಂಸದ ಬಿನೋಯ್ ವಿಶ್ವಂ ಅವರು, ಒಡಿಶಾ ಸಾವುಗಳು ಇದರ ಫಲಶ್ರುತಿಯಾಗಿದ್ದು, ರೈಲ್ವೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇಂತಹ ರಾಜೀನಾಮೆಗೆ ಪೂರ್ವನಿದರ್ಶನಗಳಿವೆ. 1956ರಲ್ಲಿ ಲಾಲ್ ಬಹಾದೂರ ಶಾಸ್ತ್ರಿಯವರು ಎರಡು ಸಲ ರೈಲ್ವೆ ಸಚಿವರ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆ ಎರಡೂ ಸಂದರ್ಭಗಳಲ್ಲಿ ನೂರಕ್ಕೂ ಅಧಿಕ ಜನರನ್ನು ಬಲಿ ತೆಗೆದುಕೊಂಡಿದ್ದ ಬೃಹತ್ ಅಪಘಾತಗಳ ಹೊಣೆಯನ್ನು ಹೊತ್ತುಕೊಳ್ಳಲು ಅವರು ಬಯಸಿದ್ದರು. ಆ ವರ್ಷದ ಆಗಸ್ಟ್‌ನಲ್ಲಿ ಆಂಧ್ರಪ್ರದೇಶದಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ 112 ಜನರು ಸಾವನ್ನಪ್ಪಿದ ಬಳಿಕ ಶಾಸ್ತ್ರಿಯವರು ಆಗಿನ ಪ್ರಧಾನಿ ಜವಾಹರಲಾಲ ನೆಹರು ಅವರಿಗೆ ತನ್ನ ರಾಜೀನಾಮೆಯನ್ನು ಸಲ್ಲಿಸಿದ್ದರಾದರೂ ನೆಹರು ಅದನ್ನು ಸ್ವೀಕರಿಸಿರಲಿಲ್ಲ, ನವಂಬರ್‌ನಲ್ಲಿ ತಮಿಳುನಾಡಿನಲ್ಲಿ ಸಂಭವಿಸಿದ್ದ ಇನ್ನೊಂದು ಭೀಕರ ಅಪಘಾತದಲ್ಲಿ 144 ಜನರು ಮೃತಪಟ್ಟಿದ್ದಾಗಲೂ ಶಾಸ್ತ್ರಿ ರಾಜೀನಾಮೆಯನ್ನು ಸಲ್ಲಿಸಿದ್ದರು ಮತ್ತು ನೆಹರು ಅದನ್ನು ಮನಸ್ಸಿಲ್ಲದ ಮನಸ್ಸಿನಿಂದ ಒಪ್ಪಿಕೊಂಡಿದ್ದರು.

ಸ್ವತಂತ್ರ ಭಾರತದಲ್ಲಿ ಭಾರೀ ದುರಂತಗಳ ಬಳಿಕ ರೈಲ್ವೆ ಸಚಿವರು ತಮ್ಮ ರಾಜೀನಾಮೆಗಳ ಕೊಡುಗೆಯನ್ನು ಮುಂದಿರಿಸುವುದು ಪರಿಪಾಠವಾಗಿಬಿಟ್ಟಿದೆ. ಶಾಸ್ತ್ರಿಯವರ ಬಳಿಕ ವಿವಿಧ ರಾಜಕೀಯ ರಂಗಗಳ ರೈಲ್ವೆ ಸಚಿವರು ತಮ್ಮ ಅಧಿಕಾರಾವಧಿಯಲ್ಲಿ ನಡೆದಿದ್ದ ರೈಲು ಅಪಘಾತಗಳ ಹೊಣೆಯನ್ನು ಹೊತ್ತುಕೊಂಡು ರಾಜೀನಾಮೆಗೆ ಮುಂದಾಗಿದ್ದರು. ಆದರೆ ಈ ಎಲ್ಲ ವರ್ಷಗಳಲ್ಲಿ ತಮ್ಮ ರಾಜೀನಾಮೆ ಅಂಗೀಕರಿಸಲ್ಪಟ್ಟ ಬಳಿಕ ಕೇವಲ ಇಬ್ಬರು ರೈಲ್ವೆ ಸಚಿವರು ಮಾತ್ರ ಹುದ್ದೆಯನ್ನು ತೊರೆದಿದ್ದರು. ಓರ್ವರು ಶಾಸ್ತ್ರಿಯವರಾಗಿದ್ದರೆ ಇನ್ನೋರ್ವರು ನಿತೀಶ್ ಕುಮಾರ್. 1999ರಲ್ಲಿ 290 ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಅಸ್ಸಾಮಿನಲ್ಲಿ ಸಂಭವಿಸಿದ್ದ ಭಾರೀ ರೈಲು ಅಪಘಾತದ ಬಳಿಕ ನಿತೀಶ್ ರೈಲ್ವೆ ಸಚಿವರ ಹುದ್ದೆಗೆ ರಾಜೀನಾಮೆ ನೀಡಿದ್ದರು.

2000ನೇ ಸಾಲಿನಲ್ಲಿ ಆಗ ಎನ್‌ಡಿಎ ಸರಕಾರದಲ್ಲಿ ಸಚಿವೆಯಾಗಿದ್ದ ಮಮತಾ ಬ್ಯಾನರ್ಜಿ ತೈಲ ಬೆಲೆ ಏರಿಕೆಯ ಕುರಿತು ಒಮ್ಮೆ ಹಾಗೂ 43 ಜನರ ಸಾವು ಮತ್ತು 100 ಜನರು ಗಾಯಗೊಳ್ಳಲು ಕಾರಣವಾಗಿದ್ದ ರೈಲು ಅಪಘಾತದ ಬಳಿಕ ಮತ್ತೊಮ್ಮೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಆದರೆ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ರಾಜೀನಾಮೆಯನ್ನು ತಿರಸ್ಕರಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಅಧಿಕಾರಾವಧಿಯಲ್ಲಿ ಅವರ ರೈಲ್ವೆ ಸಚಿವರಾಗಿದ್ದ ಸುರೇಶ ಪ್ರಭು ಅವರು ಸರಣಿ ಅಪಘಾತಗಳ ಬಳಿಕ ಹುದ್ದೆಗೆ ರಾಜೀನಾಮೆಯನ್ನು ನೀಡಲು ಮುಂದಾಗಿದ್ದರು. ಈ ಪೈಕಿ ಕಾನ್ಪುರದ ಸಮೀಪ ಪಟ್ನಾ-ಇಂದೋರ ಎಕ್ಸ್‌ಪ್ರೆಸ್‌ನ 14 ಬೋಗಿಗಳು ಹಳಿ ತಪ್ಪಿ 150 ಜನರು ಕೊಲ್ಲಲ್ಪಟ್ಟಿದ್ದರು. ಆಗ ಪ್ರಭು ಅವರ ರಾಜೀನಾಮೆಯು ಸ್ವೀಕೃತಗೊಂಡಿರಲಿಲ್ಲ, ಆದರೆ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯಕ್ಕೆ ವರ್ಗಾಯಿಸಲಾಗಿತ್ತು ಮತ್ತು ಪಿಯೂಷ ಗೋಯಲ್ ನೂತನ ರೈಲ್ವೆ ಸಚಿವರಾಗಿ ನೇಮಕಗೊಂಡಿದ್ದರು.

ಕೃಪೆ: thenewsminute.com

share
Next Story
X