Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ...

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ 1500 ಪ್ರಯಾಣಿಕರಿಗೆ ಊಟ, ಅಗತ್ಯ ಸೌಕರ್ಯ ಕಲ್ಪಿಸಿದ ಸರಕಾರ

4 Jun 2023 3:04 PM IST
share
ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ 1500 ಪ್ರಯಾಣಿಕರಿಗೆ ಊಟ, ಅಗತ್ಯ ಸೌಕರ್ಯ ಕಲ್ಪಿಸಿದ ಸರಕಾರ

ಬೆಂಗಳೂರು, ಜೂನ್ 4: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಿದ್ದಾರೆ.

ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತದ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದ್ದು, ಈಶಾನ್ಯ ರಾಜ್ಯಗಳಿಗೆ ಕೋಲ್ಕತ್ತಾ ಮುಂತಾದ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾನದಲ್ಲೇ ದಿನ ಕಳೆಯುವಂತಹ ಪರಿಸ್ಥಿತಿ ಒದಗಿದ್ದರಿಂದ, ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಬಿಬಿಎಂಪಿ ವಲಯ ಆಯುಕ್ತ ಪಿ.ಎನ್.ರವೀಂದ್ರ, ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ಮತ್ತು ತಂಡದವರ ಮಾರ್ಗದರ್ಶನದಲ್ಲಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ವಲಸೆ ಕಾರ್ಮಿಕರಿಗೆ ಊಟ, ತಿಂಡಿ, ನೀರು ಇತ್ಯಾದಿಗಳ ವ್ಯವಸ್ಥೆಯನ್ನು ಪೂರೈಸಲಾಗಿದೆ.ಬಿಬಿಎಂಪಿ ವತಿಯಿಂದ ಅವರಿಗೆ ವೈದ್ಯಕೀಯ ಸೌಲಭ್ಯ ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

► ಸಿಎಂ ಅಭಿನಂದನೆ

''ನಮ್ಮ ಈ ಕಾರ್ಯಕ್ಕೆ ಜೊತೆಯಾದ ಜೆಎಂಸಿ, ಕೆ2ಕೆ, ಡಿಮಾರ‍್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳಿಗೆ ಹಾಗೂ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಮರ್ಸಿ ಫೌಂಡೇಷನ್, ತೌಸೀಫ್ ಮತ್ತು ತನ್ವೀರ್, ಕ್ಲಿಫ್ಟಿನ್ ಹಾಗೂ ಮೈತ್ರಿ ಮತ್ತು ತಂಡದವರಿಗೆ ಧನ್ಯವಾದಗಳು. ಇಂಥ ಸಂಕಷ್ಟದ ಸಮಯದಲ್ಲಿ ತಾವು ತೋರಿದ ಮಾನವೀಯ ಕಾಳಜಿ ಶ್ಲಾಘನೀಯವಾದುದ್ದು'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

ಒಡಿಶಾದಲ್ಲಿ ರೈಲು ದುರಂತ‌ ಸಂಭವಿಸಿದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1500 ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಪೂರ್ಣ ಪ್ರಮಾಣದಲ್ಲಿ ನೆರವಿಗೆ ನಿಂತಿದ್ದೇವೆ.… pic.twitter.com/Y4rIMF1SU8

— CM of Karnataka (@CMofKarnataka) June 4, 2023
share
Next Story
X