ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ, ಜೂ.6: ಜಿಲ್ಲೆಯಲ್ಲಿ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ ಗಳು ಜೂನ್ 9ರಿಂದ 11ರವರೆಗೆ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ನಡೆಯಲಿದೆ.
ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿ ಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅದೇಶ ಹೊರಡಿಸಿದ್ದಾರೆ.
Next Story