ಅವಿಶ್ವಾಸ ನಿರ್ಣಯ ಮಂಡಿಸಿದರೆ ಸಭಾಪತಿ ಸ್ಥಾನದಲ್ಲಿ ಒಂದು ಕ್ಷಣವೂ ಕೂರುವುದಿಲ್ಲ: ಬಸವರಾಜ ಹೊರಟ್ಟಿ
''ಸಿಎಂ ಭೇಟಿಗೆ ಯಾವುದೇ ರಾಜಕೀಯ ಕಾರಣಗಳಿಲ್ಲ''
''ಸಿಎಂ ಭೇಟಿಗೆ ಯಾವುದೇ ರಾಜಕೀಯ ಕಾರಣಗಳಿಲ್ಲ''
ಬೆಂಗಳೂರು, ಜೂ.6: ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್‍ಗೆ ಬಹುಮತವಿಲ್ಲ. ಒಂದು ವೇಳೆ ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸಭಾಪತಿ ಸ್ಥಾನದಲ್ಲಿ ನಾನು ಒಂದು ಕ್ಷಣವೂ ಕೂರುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷ ವಿಧಾನಪರಿಷತ್ತಿನಲ್ಲಿ ಕೆಲವು ಸ್ಥಾನಗಳು ತೆರವಾಗಲಿವೆ. ಆಗ ಬಿಜೆಪಿಗೆ ಬಹುಮತದ ಸಮಸ್ಯೆ ಎದುರಾಗಬಹುದು ಎಂದರು.
ಮುಂದಿನ ಸಾಲಿನ ಜೂನ್ ತಿಂಗಳವರೆಗೂ ವಿಧಾನಪರಿಷತ್ತಿನಲ್ಲಿ ಸಭಾಪತಿ ಸ್ಥಾನಕ್ಕೆ ಯಾವುದೆ ಸಮಸ್ಯೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಹಲವು ವರ್ಷಗಳಿಂದ ಸ್ನೇಹಿತರು. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿದ್ದೇನೆ. ಇದರಲ್ಲಿ ಯಾವುದೆ ರಾಜಕೀಯ ಕಾರಣಗಳಿಲ್ಲ ಎಂದು ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದರು.
Next Story