ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿರುವ 'ಗೃಹ ಲಕ್ಷ್ಮೀ' ಅರ್ಜಿ ನಕಲಿ
ಬೆಂಗಳೂರು; 9: ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಮಹತ್ವದ ‘ಗೃಹಲಕ್ಷ್ಮಿ' ಯೋಜನೆಯ ಅರ್ಜಿ ನಮೂನೆ ಇನ್ನೂ ಬಿಡುಗಡೆಯಾಗಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ.
ಈ ಬಗ್ಗೆ 'ವಾರ್ತಾಭಾರತಿ'ಯೊಂದಿಗೆ ಮಾತನಾಡಿದ ಇಲಾಖೆಯ ನಿರ್ದೇಶನಾಲಯ ಕಚೇರಿಯ ಸಿಬ್ಬಂದಿಯೊಬ್ಬರು, ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿ ಇಲಾಖೆಯಿಂದ ಅಧಿಕೃತವಾಗಿ ಅರ್ಜಿ ನಮೂನೆ ಬಿಡುಗಡೆಯಾಗಿಲ್ಲ. ಅದರ ಸಿದ್ಧತೆ ನಡೆಯುತ್ತಿದೆ, ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಮೂನೆ ನಕಲಿ ಎಂದು ತಿಳಿಸಿದರು.
Next Story