BDA ಸೇರಿ ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಕೇಶ್ ಸಿಂಗ್ ನೇಮಕ
ಬೆಂಗಳೂರು, ಜೂ.8: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ನಗರಾಭಿವೃದ್ಧಿ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
10 ಯೋಜನಾ ಪ್ರಾಧಿಕಾರಗಳು: ಆನೇಕಲ್ ಯೋಜನಾ ಪ್ರಾಧಿಕಾರ, ಹೊಸಕೋಟೆ ಯೋಜನಾ ಪ್ರಾಧಿಕಾರ, ಬೆಂಗಳೂರು ಅಂತರ್ರಾಷ್ಟ್ರೀಯ ವಿಮಾಣ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ, ಮಾಗಡಿ ಯೋಜನಾ ಪ್ರಾಧಿಕಾರ, ಚನ್ನಪಟ್ಟಣ ಯೋಜನಾ ಪ್ರಾಧಿಕಾರ, ಕನಕಪುರ ಯೋಜನಾ ಪ್ರಾಧಿಕಾರ, ನೆಲಮಂಗಲ ಯೋಜನಾ ಪ್ರಾಧಿಕಾರ, ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ ಹಾಗೂ ಗ್ರೇಟರ್ ಬೆಂಗಳೂರು-ಬಿಡದಿ ಸ್ಮಾರ್ಟ್ ಸಿಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ರಾಕೇಶ್ ಸಿಂಗ್ರನ್ನು ನೇಮಕ ಮಾಡಲಾಗಿದೆ.
Next Story