ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ 108ನೇ ಜನ್ಮ ದಿನಾಚರಣೆ
ಮಂಗಳೂರು, ಜೂ. 8: ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ 108ನೇ ಜನ್ಮ ದಿನವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಂಗಳೂರಿನ ಮಂಜುನಾಥ್ ಎಜುಕೇಶನ್ ಟ್ರಸ್ಟ್(ರಿ) ನ ಸಹಯೋಗ ದಲ್ಲಿ ಅವರ ಹುಟ್ಟೂರಾದ ಕಾಸರಗೋಡು ಜಿಲ್ಲೆಯ ಜೋಡುಕಲ್ಲು ಕಯ್ಯಾರು ಗ್ರಾಮದ ಶ್ರೀ ರಾಮಕೃಷ್ಣ ಕಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ವಿಶ್ವನಾಥ ಹಿರೇಮಠ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ, ದ.ಕ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಆಳ್ವಾಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಸಿ. ಸೋಮಶೇಖರ್, ಸಾಹಿತಿ ಪ್ರೊ.ಕೆ.ಇ. ರಾಧಾಕೃಷ್ಣ ಮತ್ತಿತರರು ಪಾಲ್ಗೊಂಡಿದ್ದರು.
Next Story