ಬಾಡಿಗೆ ಭಾಷಣಕಾರರನ್ನೆಲ್ಲಾ ಲೇಖಕ ಅಂದರೆ ಹೇಗೆ?: ಸಚಿವ ಪ್ರಿಯಾಂಕ್ ಖರ್ಗೆ
''ಸೂಲಿಬೆಲೆ ಬರೆದಿರುವ ಪಠ್ಯವನ್ನು ತೆಗೆಯುತ್ತೇವೆ''
''ಸೂಲಿಬೆಲೆ ಬರೆದಿರುವ ಪಠ್ಯವನ್ನು ತೆಗೆಯುತ್ತೇವೆ''
ಬೆಂಗಳೂರು : ಬಾಡಿಗೆ ಭಾಷಣಕಾರರನ್ನೆಲ್ಲಾ ಲೇಖಕರು, ಸಾಹಿತಿಗಳನ್ನಾಗಿ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿನ ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯವನ್ನು ತೆಗೆಯುತ್ತೇವೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳೊದಿಗೆ ಮಾತನಾಡಿದ ಅವರು, 'ಚಕ್ರವರ್ತಿ ಸೂಲಿಬೆಲೆಯ ಪಠ್ಯವನ್ನು ಯಾವ ಆಧಾರದಲ್ಲಿ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ' ಎಂದು ಪ್ರಶ್ನಿಸಿದರು.
''ಅವರು ಯಾವ ಪಿಎಚ್‌ಡಿ ಮಾಡಿದ್ದಾರೆ? ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದರೆ ಅದನ್ನ ನಮ್ಮ ಮಕ್ಕಳು ಓದಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ವಾಟ್ಸ್ ಅಪ್ ಯುನಿವರ್ಸಿಟಿಯಲ್ಲಿ ಓದೋರು ಇವರು. ಅವರು ಬರೆದ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು? ಎಂದು ಆತಂಕ ವ್ಯಕ್ತಪಡಿಸಿದರು.
Next Story