Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾಜದಲ್ಲಿನ ಜಾತಿ ತಾರತಮ್ಯ ಅಳಿಸಲು...

ಸಮಾಜದಲ್ಲಿನ ಜಾತಿ ತಾರತಮ್ಯ ಅಳಿಸಲು ಶ್ರಮಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

‘ಡಾ.ರಾಜ್‍ಕುಮಾರ್ ಸರಳತೆ-ಸಂಸ್ಕಾರದ ರಾಯಭಾರಿ’

9 Jun 2023 11:25 PM IST
share
ಸಮಾಜದಲ್ಲಿನ ಜಾತಿ ತಾರತಮ್ಯ ಅಳಿಸಲು ಶ್ರಮಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
‘ಡಾ.ರಾಜ್‍ಕುಮಾರ್ ಸರಳತೆ-ಸಂಸ್ಕಾರದ ರಾಯಭಾರಿ’

ಬೆಂಗಳೂರು, ಜೂ.9: ಜಾತಿ ತಾರತಮ್ಯದ ಕಾರಣದಿಂದ ಶಿಕ್ಷಣದಿಂದ ವಂಚಿತರಾದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರಿಗೆ ಶಿಕ್ಷಣದ ಜತೆಗೆ ಬದುಕಿನ ಅವಕಾಶಗಳೂ ದೊರಕುವುದಿಲ್ಲ. ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರು ಈ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಅಳಿಸುವ ಮೂಲಕ ದೇಶದ ಮತ್ತು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. 

ಶುಕ್ರವಾರ ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಡಾ.ರಾಜ್ ಕುಮಾರ್ ಅಕಾಡೆಮಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 2022ರ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. 

ಡಾ.ರಾಜ್ ಕುಮಾರ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ. ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುವ ದೊಡ್ಡ ಸಂಸ್ಕಾರದ ರಾಯಭಾರಿ ಆಗಿದ್ದವರು. ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಡಾ.ರಾಜ್ ಕುಮಾರ್ ಅಕಾಡೆಮಿ ಅಪಾರ ಯಶಸ್ಸು ಗಳಿಸಲು ರಾಘವೇಂದ್ರ ರಾಜ್ ಕುಮಾರ್ ಮತ್ತು ಅಕಾಡೆಮಿ ಸಿಬ್ಬಂದಿಯ ಕೊಡುಗೆ ಹೆಚ್ಚಿದೆ. ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರ ಇದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಮಾಜಿ ರಕ್ಷಣಾ ಕಾರ್ಯದರ್ಶಿ ಡಾ.ಶ್ರೀನಿವಾಸನ್, ಭಾರತೀಯ ಸೇನಾ ಸಿಬ್ಬಂದಿಯ ಮಾಜಿ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಮೇಶ್ ಹಲಗಲಿ, ಮಾಜಿ ಪ್ರಧಾನ ಮುಖ್ಯ ಆಯುಕ್ತ ಕೆ. ಸತ್ಯನಾರಾಯಣ, ಕೃಷಿ ವಿವಿ ವಿಶ್ರಾಂತ ಉಪಕುಲಪತಿ ಕೆ.ನಾರಾಯಣಗೌಡ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಉಪಸ್ಥಿತರಿದ್ದರು.

''ಬನ್ನಿ ಬನ್ನಿ ನಮ್ ಕಾಡಿನವರು'': ಡಾ.ರಾಜ್ ಮತ್ತು ತಮ್ಮ ನಡುವಿನ ಒಡನಾಟದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ರಾಜ್ ಅವರನ್ನು ಭೇಟಿ ಮಾಡಲು ಹೋದಾಗಲಿಲ್ಲ, ‘ಬನ್ನಿ ಬನ್ನಿ ನಮ್ ಕಾಡಿನವರು’ ಎಂದು ಖುಷಿಯಿಂದ ಕರೆಯುತ್ತಿದ್ದರು. ನಾವಿಬ್ಬರೂ ಒಂದೇ ಜಿಲ್ಲೆಯವರು ಎಂದು ಸ್ಮರಿಸಿದರು.

share
Next Story
X