ಸಿಎಂ, ಡಿಸಿಎಂ ಭೇಟಿಯಾದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಪುತ್ರ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಇದಕ್ಕೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಂಸದ ರಾಘವೇಂದ್ರ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಭೇಟಿಯಾಗಿ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರನ್ನು ಭೇಟಿ ಮಾಡಿ ಶುಭಾಶಯವನ್ನು ತಿಳಿಸಿ, ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ಸಹಕಾರವನ್ನು ಕೋರಿದೆನು. @CMofKarnataka @siddaramaiah @DKShivakumar pic.twitter.com/bFLWmYqhRq
— B Y Raghavendra (@BYRBJP) June 12, 2023