ಬೆಂಗಳೂರು | ದುಪ್ಪಟ್ಟು ಹಣ ಕೇಳಿದ್ದಕ್ಕೆ ಜಗಳ; ಆಟೊ ಚಾಲಕನಿಂದ ಪ್ರಯಾಣಿಕನ ಕೊಲೆ
ಬೆಂಗಳೂರು, ಜೂ.13: ರಾತ್ರಿ ವೇಳೆಯಲ್ಲಿ ಕೆಲಸ ಮುಗಿಸಿಕೊಂಡು ಆಟೊರಿಕ್ಷಾದಲ್ಲಿ ಹೋಗುತ್ತಿದ್ದ ಪ್ರಯಾಣಿಕರ ಬಳಿ ಹೆಚ್ಚಿನ ಹಣ ಕೇಳಿದ ಚಾಲಕನೊಂದಿಗೆ ನಡೆದ ಗಲಾಟೆಯು ವಿಕೋಪಕ್ಕೆ ತಿರುಗಿ ಇಬ್ಬರು ಪ್ರಯಾಣಿಕರಿಗೆ ಆಟೊ ಚಾಲಕ ಚಾಕುವಿನಿಂದ ಇರಿದಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಸೋಮವಾರ ವರದಿಯಾಗಿದೆ.
ಅಸ್ಸಾಂ ಮೂಲದ ಅಹ್ಮದ್ (28) ಕೊಲೆಯಾದವರು, ಗಾಯಗೊಂಡಿರುವ ಮತ್ತೊಬ್ಬ ಯುವಕ ಅಯೂಬ್ (26) ಅನ್ನು ಸ್ಥಳೀಯರು ಅಸ್ಪತ್ರೆಗೆ ದಾಖಲು ಮಾಡಿದ್ದು, ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಇವರಿಬ್ಬರೂ ಅಣ್ಣ-ತಮ್ಮಂದಿರಾಗಿದ್ದು, ರವಿವಾರ ರಾತ್ರಿ ಯಶವಂತಪುರ ಬಳಿಯ ಸಾಬೂನು ಕಾರ್ಖಾನೆ ಬಳಿ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೃತ್ಯ ನಡೆಸಿ ಪರಾರಿಯಾಗಿರುವ ಆಟೊರಿಕ್ಷಾ ಚಾಲಕ ಅಶ್ವಥ್ ಎಂಬಾತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
Next Story