ಬಿಬಿಎಂಪಿ: ಮತ್ತೆ ಮಾಯಣ್ಣ ಅಮಾನತು
ಬೆಂಗಳೂರು, ಜೂ.13: ಬಿಬಿಎಂಪಿ ಪಶುಪಾಲನೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಮಾಯಣ್ಣ ಅವರನ್ನು ಮತ್ತೆ ಅಮಾನತುಗೊಳಿಸಲಾಗಿದೆ.
ಕಚೇರಿಗೆ ಹಾಜರಾಗದ್ದರಿಂದ ಗಂಭೀರ ಕರ್ತವ್ಯಲೋಪ ಎಸಗಿರುವುದರಿಂದ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ ಮೇರೆಗೆ ಆಡಳಿತದ ಉಪ ಆಯುಕ್ತರು ಅಮಾನತಿನ ಆದೇಶ ಹೊರಡಿಸಿದ್ದಾರೆ.
ರಸ್ತೆ ಮೂಲಸೌಕರ್ಯ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಮಾಯಣ್ಣ ಅವರನ್ನು ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಳಿಸಲಾಗಿತ್ತು. ನಂತರ ಅಮಾನತು ತೆರೆವುಗೊಳಿಸಿ, 2022 ಜುಲೈ 19ರಂದು ಪಶುಪಾಲನೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನಿಯೋಜಿಸಲಾಗಿತ್ತು. ಅಂದಿನಿಂದ ಇಲ್ಲಿಯ ವರೆಗೆ ಕರ್ತವ್ಯಕ್ಕೆ ಹಾಜರಾಗಿಲ್ಲ. ಹೀಗಾಗಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story