ಡಿಕೆಶಿ ಬಳಿಕ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಎಂ.ಪಿ ರೇಣುಕಾಚಾರ್ಯ
ಹೊಂದಾಣಿಕೆ ರಾಜಕಾರಣ ಬಗ್ಗೆ ಮಾಜಿ ಶಾಸಕರ ಪ್ರತಿಕ್ರಿಯೆ ಏನು?
ಹೊಂದಾಣಿಕೆ ರಾಜಕಾರಣ ಬಗ್ಗೆ ಮಾಜಿ ಶಾಸಕರ ಪ್ರತಿಕ್ರಿಯೆ ಏನು?
ಬೆಂಗಳೂರು: ಮಾಜಿ ಸಚಿವ ಹಾಗೂ ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂಧಿಸಿದರು.
ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಎಂ.ಪಿ.ರೇಣುಕಾಚಾರ್ಯ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು. ಈ ವೇಳೆ ಕೆಲ ಕಾಲ ಮಾತುಕತೆ ನಡೆಸಿದರು.
ಇದಕ್ಕೂ ಮೊದಲು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ರೇಣುಕಾಚಾರ್ಯ ಭೇಟಿಯಾಗಿದ್ದರು.
ಇನ್ನು ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಹೊಂದಾಣಿಕೆ ರಾಜಕಾರಣದ ಇದೆ ಎಂಬ ಪ್ರತಾಪ್ ಸಿಂಹ ಮತ್ತು ಸಿಟಿ ರವಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, "ಹೊಂದಾಣಿಕೆ ರಾಜಕಾರಣದ ಬಗ್ಗೆ ಸಿಟಿ ರವಿ, ಪ್ರತಾಪ್ ಸಿಂಹ ಅವರನ್ನೇ ಕೇಳಬೇಕು, ನನಗೆ ಮಾಹಿತಿ ಇಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೆ ಏನು ಎನ್ನುವ ಬಗ್ಗೆ ಮಾಹಿತಿ ಇಲ್ಲ, ಅವರನ್ನೇ ಕೇಳಿ'' ಎಂದು ಪ್ರತಿಕ್ರಿಯೆ ನೀಡಿದರು.
Next Story