ಜೂ.18ರಿಂದ ಗೃಹಜ್ಯೋತಿಗೆ ನೋಂದಣಿ
ಮಂಗಳೂರು : ಗೃಹ ಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿಯು ಜೂನ್ 18 ರಿಂದ ಆರಂಭಗೊಳ್ಳಲಿದೆ.
ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಫಲಾನುವಿಭಗಳು ಸೇವಾ ಸಿಂಧು ಪೋರ್ಟಲ್
ಫಲಾನುಭವಿಗಳ ಆಧಾರ್‌ಕಾರ್ಡ್, ಗ್ರಾಹಕರ ಐಡಿ ಮಾಹಿತಿಯನ್ನು ನೋಂದಣಿ ಸಮಯದಲ್ಲಿ ನೀಡಬೇಕು. ಬೆಂಗಳೂರು ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಚೇರಿಗಳಲ್ಲಿಯೂ ನೋಂದಾಯಿಸಬಹುದು.
ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಟ 200 ಯೂನಿಟ್‌ಗಳವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿತ್ತಾರೆ.
ಈ ಯೋಜನೆಯು 2023ರ ಆಗಸ್ಟ್ 1ರಿಂದ ಜಾರಿಗೆ ಬರಲಿದ್ದು, ಅರ್ಹ ಫಲಾನುಭವಿಗಳು ಆಗಸ್ಟ್ 1ರಿಂದ ಶೂನ್ಯ ಬಿಲ್ಲು ಪಡೆಯಲಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯುತ್ ಶಕ್ತಿ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 1912 ಅನ್ನು ಸಂಪರ್ಕಿಸಬಹುದು ಎಂದು ಇಂಧನ ಇಲಾಖೆಯ ಪ್ರಕಟನೆ ತಿಳಿಸಿದೆ.