ಶಾಲೆ, ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ: ಸಂಪುಟ ತೀರ್ಮಾನ
ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದ ಪ್ರಮುಖ ಅಂಶಗಳು ಇಲ್ಲಿವೆ...
ಬೆಂಗಳೂರು, ಜೂ. 15: ರಾಜ್ಯದ ಶಾಲೆ, ಕಾಲೇಜು ಹಾಗೂ ವಿಶ್ವ ವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ.
ಗುರುವಾರ ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜರುಗಿದ ಮೊರನೇ ಸಚಿವ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಮಾಡಿದ್ದು, ರಾಜ್ಯ ಎಲ್ಲ ಶಾಲೆ- ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದು ಕಡ್ಡಾಯಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆ ಬಳಿಕ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ‘ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ನಾಡಗೀತೆ ಮತ್ತು ರಾಷ್ಟ್ರಗೀತೆಯ ಜೊತೆಗೆ ಸಂವಿಧಾನದ ಪ್ರಸ್ತಾವನೆಯನ್ನೂ ಕಡ್ಡಾಯವಾಗಿ ಓದಬೇಕೆಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
‘ಕೋಮು ಶಕ್ತಿಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಹೆಚ್ಚು ಸಕ್ರಿಯರಾಗಿರುವ ಹಿನ್ನಲೆಯಲ್ಲಿ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಸಂವಿಧಾನದ ಆಶಯಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಜವಾಬ್ದಾರಿಯುತ ಸಮಾಜದ ನಿರ್ಮಾಣ ಆಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅವರು ಉಲ್ಲೇಖಿಸಿದರು.
ಇನ್ನೂ ಸಮಾಜ ಕಲ್ಯಾಣ ಇಲಾಖೆಯ ಪ್ರತಿ ಕಚೇರಿಯಲ್ಲಿಯೂ ಸಂವಿಧಾನದ ಪ್ರಸ್ತಾವನೆಯ ಪ್ರತಿಯನ್ನು ಅಂಟಿಸಬೇಕು. ಅಲ್ಲದೆ, ಆರೋಗ್ಯಕರ ಸಮಾಜದ ನಿರ್ಮಾಣದ ದೃಷ್ಟಿಯಿಂದ ಇದೊಂದು ಮಹತ್ತರ ನಿರ್ಧಾರ ಆಗಿದೆ ಎಂದು ಹಲವು ಸಾಹಿತಿಗಳು, ಚಿಂತಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಡಾ.ಮಹದೇವಪ್ಪ ನುಡಿದರು.
ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದ ಪ್ರಮುಖ ಅಂಶಗಳು ಇಲ್ಲಿವೆ...
-ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಇಲಾಖೆ ತಂದ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದೆ.
-ಎಪಿಎಂಸಿ ಕಾನೂನನ್ನು ಪರಿಷ್ಕರಿಸಿ ಹಿಂದಿನ ಸರ್ಕಾರದವರು ಸತ್ವ ಕಳೆದಿದ್ದರು. ಆ ತಿದ್ದುಪಡಿಯನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ.
-ಕರ್ನಾಟಕ ಮಾಹಿತಿ ತಂತ್ರಜ್ಞಾನ ಬಯೋಟೆಕ್ನಾಲಜಿ, ವಿಜ್ಞಾನ, ತಂತ್ರಜ್ಞಾನ ಇಲಾಖೆಯು ಇಸಿಎಂಎ ಅವರಿಗೆ ಫ್ಲಾಗ್ ಶಿಪ್ ಕಾರ್ಯಕ್ರಮ ಟೆಕ್ ಸಮಿಟ್ (ಇನ್ ಬೆಂಗಳೂರು ಬಿಯಾಂಡ್ ಬೆಂಗಳೂರು) ಮಾಡುವ ಪ್ರಸ್ತಾವನೆಗೆ ಒಪ್ಪಿಗೆ.
-1,081 ಕೋಟಿ ರೂ. ವೆಚ್ಚದಲ್ಲಿ 243 ಎಂಎಲ್‍ಡಿ ವೃಷಭಾವತಿ ನದಿಯ ನೀರನ್ನು 70 ಕೆರೆ ತುಂಬಿಸುವ ಪರಿಷ್ಕøತ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂ.ಗ್ರಾಮಾಂತರದ ಕೆರೆ ಭರ್ತಿ ಯೋಜನೆ.
-ವಿಪತ್ತು ನಿರ್ವಹಣೆ ಸಂಬಂಧ ನಿರ್ದೇಶನ ನೀಡಲು ಸಂಪುಟ ಉಪ ಸಮಿತಿ ರಚಿಸಲು ಒಪ್ಪಿಗೆ.
-ಸಮಾಜ ಕಲ್ಯಾಣ ಇಲಾಖೆಯು ತಂದ ಪ್ರಸ್ತಾವನೆಯಂತೆ, ಪ್ರತಿ ಕಾಲೇಜು, ಶಾಲೆಯಲ್ಲಿ ಸಂವಿಧಾನದ ಪರಿವಿಡಿಯನ್ನು ಓದಲು ತೀರ್ಮಾನ.
-ಸಾರಿಗೆ ನಿಗಮಗಳಿಂದ ಮೋಟರ್ ಟ್ಯಾಕ್ಸ್ ಮತ್ತು ಅರಿಯರ್ಸ್ 79.85 ಕೋಟಿ ಬಾಕಿ ಇದೆ. ಅದನ್ನು ಎಕ್ಸಮ್ಟ್ ಮಾಡಲಾಗಿದೆ. ನಿಗಮಗಳ ಭಾರವನ್ನು ತಗ್ಗಿಸುವುದು ಉದ್ದೇಶ.
-ಸಾರಿಗೆ ನಿಗಮಗಳು ಡಬಲ್ ಡೆಕರ್, ಎಲೆಕ್ಟ್ರಿಕ್ ವಾಹನ 28 ಕೋಟಿ ರೂ.ಕೊಡಲು ಅನುಮತಿ.
-ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಶೇ.15 ಹೆಚ್ಚಿಸಲು ಘಟನೋತ್ತರ ಅನುಮೋದನೆ.
-ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನವನ್ನು ಸಮಸ್ಯೆ ರಹಿತವಾಗಿ ಮಾಡಲು ಟೆಕ್ನಾಲಜಿ ಬಳಸಲು ತೀರ್ಮಾನ.
-ಅಗ್ನಿಶಾಮಕ ದಳ ಕಾಯ್ದೆಗೆ ತಿದ್ದುಪಡಿ.
-ಹೈಕೋರ್ಟ್‍ನ ಆಡಳಿತ ವೆಚ್ಚ ಮಿತಿ, ಹಣಕಾಸು ಅಧಿಕಾರ ಹೆಚ್ಚಳ ಮಾಡಲು ಮತ್ತು ಹೆಚ್ಚಿನ ಅಧಿಕಾರಿಗಳ ನಿಯೋಜನೆಗೆ ಒಪ್ಪಿಗೆ.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯ.#ಸಂವಿಧಾನ #ಪ್ರಜಾಪ್ರಭುತ್ವ pic.twitter.com/pPnWNvqL3B
— CM of Karnataka (@CMofKarnataka) June 15, 2023