118 ಕೋಟಿ ರೂ. ನಕಲಿ ಬಿಲ್ ಹಗರಣ; 8 ಬಿಬಿಎಂಪಿ ಎಂಜಿನಿಯರ್ ಗಳ ಅಮಾನತು
ಬೆಂಗಳೂರು: 118 ಕೋಟಿ ರೂಪಾಯಿ ಮೊತ್ತದ ನಕಲಿ ಬಿಲ್ ಸೃಷ್ಟಿಸಿದ ಆರೋಪದಲ್ಲಿ ಎಂಟು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಂಜಿನಿಯರ್ಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.
ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿಯಿಂದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತಕ್ಕೆ (ಕೆಆರ್ಐಡಿಎಲ್) ವಹಿಸಲಾದ ಕೆಲಸಗಳನ್ನು ಮಾಡದೆ ಬಿಲ್ ಮೊತ್ತ ಬಿಡುಗಡೆಯಾಗಿರುವುದು ಲೋಕಾಯುಕ್ತರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತರ ಶಿಫಾರಸಿನ ಮೇರೆಗೆ ಇದೀಗ ಸರ್ಕಾರ ಅಮಾನತು ಮಾಡಿದೆ.
ಅಲ್ಲದೆ ಹಗರಣದ ತನಿಖೆಗಾಗಿ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಿದೆ.
Next Story