ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ಅಪಘಾತ; 10 ಮಂದಿ ಪ್ರಯಾಣಿಕರಿಗೆ ಗಾಯ
ಬೆಂಗಳೂರು, ಜೂ.18: ಇಲ್ಲಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ವೊಂದು ಅಪಘಾತಕ್ಕೀಡಾಗಿ, 10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ರವಿವಾರ ಬೆಳಗ್ಗೆ ವರದಿಯಾಗಿದೆ.
ಅಪಘಾತದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ವಿಮಾಣ ನಿಲ್ದಾಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ನಡುವೆ ಕಾರ್ಯನಿರ್ವಹಿಸುತ್ತಿದ್ದ ಶಟಲ್ ಬಸ್ ಇಂದು ಬೆಳಗ್ಗೆ ಟರ್ಮಿನಲ್ –2ರಿಂದ ಟರ್ಮಿನಲ್ –1ಕ್ಕೆ ತೆರಳುವ ವೇಳೆ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ 10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಘಟನೆ ವೇಳೆ ಬಸ್ಸಿನಲ್ಲಿ ಒಟ್ಟು 17 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ; ಬೆಂಗಳೂರು | ಐಟಿ ಕಂಪೆನಿಗೆ ಬಾಂಬ್ ಬೆದರಿಕೆ ಪ್ರಕರಣ: ಆರೋಪಿ ನವನೀತ್ ಪ್ರಸಾದ್ ಬಂಧನ
Next Story