ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ KCCI
ಬೆಂಗಳೂರು: ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCCI) ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ.
ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.
Next Story