ಹೆಬ್ರಿ ತಾಲೂಕು ಗ್ರಾಪಂಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟ
ಹೆಬ್ರಿ, ಜೂ.19: ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ್‌ಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಹುದ್ದೆಗಳಿಗೆ ಮೀಸಲಾತಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ನಿಗದಿ ಪಡಿಸಲಾಯಿತು.
ಕುಚ್ಚೂರು ಗ್ರಾಪಂ: ಅಧ್ಯಕ್ಷ- ಅನುಸೂಚಿತ ಪಂಗಡ (ಮಹಿಳೆ), ಉಪಾಧ್ಯಕ್ಷ-ಸಾಮಾನ್ಯ. ನಾಡ್ಪಾಲು: ಅಧ್ಯಕ್ಷ-ಅನುಸೂಚಿತ ಜಾತಿ (ಮಹಿಳೆ), ಉಪಾಧ್ಯಕ್ಷ- ಹಿಂದುಳಿದ ವರ್ಗ ಅ. ಹೆಬ್ರಿ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ (ಮಹಿಳೆ). ಚಾರಾ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ.
ಶಿವಪುರ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ. ಮುದ್ರಾಡಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾದ್ಯಕ್ಷ- ಅನುಸೂಚಿತ ಜಾತಿ (ಮಹಿಳೆ). ವರಂಗ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಬೆಳ್ವೆ: ಅಧ್ಯಕ್ಷ- ಹಿಂದುಳಿದ ವರ್ಗ ಅ (ಮಹಿಳೆ), ಉಪಾಧ್ಯಕ್ಷ- ಅನುಸೂಚಿತ ಪಂಗಡ (ಮಹಿಳೆ), ಮಡಾಮಕ್ಕಿ: ಅಧ್ಯಕ್ಷ- ಸಾಮಾನ್ಯ, ಉಪಾದ್ಯಕ್ಷ- ಸಾಮಾನ್ಯ ಮಹಿಳೆ.