ನೈಋತ್ಯ ಮಾನ್ಸೂನ್ ಮತ್ತೆ ಸಕ್ರಿಯ; ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆ ಸಾಧ್ಯತೆ
ಉಡುಪಿ, ಜೂ.20: ತಮಿಳುನಾಡಿನ ತೀರ ಪ್ರದೇಶದಲ್ಲಿ ಚಂಡಮಾರುತ ದ ಚಟುವಟಿಕೆಗಳು ಕಂಡು ಬಂದಿದ್ದು ಅದು ಪಶ್ಚಿಮ ದ ಕೇರಳ ಮತ್ತು ಕರ್ನಾಟಕದ ತೀರದಲ್ಲಿ ಮುಂದುವರಿಯುವುದರಿಂದ ಕರ್ನಾಟಕ ಕರಾವಳಿಯಲ್ಲಿ ನೈಋತ್ಯ ಮಾನ್ಸೂನ್ (ಮುಂಗಾರು) ಮತ್ತೆ ಚುರುಕು ಗೊಳ್ಳುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದರಿಂದ ಮುಂದಿನ 4-5 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ದಿಂದ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಜೂನ್ 24-25ರ ನಂತರ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಭಾರೀ ಮಳೆಯೊಂದಿಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.
Next Story