ಪರಿಷತ್ ಉಪ ಚುನಾವಣೆ: ಸಚಿವ ಎನ್.ಎಸ್ ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಕೆ
ಬೆಂಗಳೂರು, ಜೂನ್ 20 : ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಎರಡನೆಯ ಅಭ್ಯರ್ಥಿಯಾಗಿ ಸಚಿವ ಎನ್ ಎಸ್ ಬೋಸರಾಜು ಹಾಗೂ ಮೂರನೆಯ ಅಭ್ಯರ್ಥಿಯಾಗಿ ತಿಪ್ಪಣ್ಣಪ್ಪ ಕಮಕನೂರು ಅವರು ಇಂದು ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮ ಪತ್ರ ಸಲ್ಲಿಕೆ ಮಾಡಿದರು.
ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ ಅವರು ಉಪಸ್ಥಿತರಿದ್ದರು.