ನಾರಾಯಣ ಕಾಮತ್
ಉಡುಪಿ, ಜೂ.20: ಭಾರತೀಯ ವಾಯುಸೇನೆಯ ತಾಂತ್ರಿಕ ವಿಭಾಗದಲ್ಲಿ 15 ವರ್ಷ ಸೇವೆ ಸಲ್ಲಿಸಿದ್ದ ಎಚ್. ನಾರಾಯಣ ಕಾಮತ್(73) ಅವರು ಅಲ್ಪಕಾಲದ ಅಸೌಖಯದಿಂದ ಸೋಮವಾರ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಪತಂಜಲಿ ಯೋಗ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ಇವರು ಹಲವಾರು ಯೋಗ ಶಿಬಿರ ಗಳನ್ನು ಆಯೋಜಿಸಿ ತರಬೇತಿ ನೀಡಿದ್ದರು. ಪಟ್ಲ ರೂರಲ್ ಎಜ್ಯುಕೇಷನ್ ಸೊಸೈಟಿಯ ಆಡಳಿತ ಮಂಡಳಿಯ ಸದಸ್ಯರಾಗಿದ್ದರು.
Next Story