ಅಕ್ಕಿ ಖರೀದಿಗೆ ಪ್ರಯತ್ನ; ಕೇಂದ್ರ ಆಹಾರ ಸಚಿವರನ್ನು ಭೇಟಿಯಾಗಲಿರುವ ಕೆ.ಎಚ್.ಮುನಿಯಪ್ಪ
ಬೆಂಗಳೂರು: ಅನ್ನ ಭಾಗ್ಯ ವಿಚಾರ ಸಂಬಂಧ ಕೇಂದ್ರ ಆಹಾರ ಸರಬರಾಜು ಸಚಿವರನ್ನು ಇಂದು(ಜೂ.21) ಭೇಟಿಯಾಗುತ್ತೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ ಇಂದು ಹೊಸದಿಲ್ಲಿಯಲ್ಲಿ ಕೇಂದ್ರ ಆಹಾರ ಸರಬರಾಜು ಸಚಿವರನ್ನು ಭೇಟಿಯಾಗುತ್ತೇನೆ. ಜತೆಗೆ, ಒಡಿಶಾ, ಚತ್ತೀಸಗಢ, ಆಂಧ್ರ ಪ್ರದೇಶ, ತೆಲಂಗಾಣ ಎಲ್ಲ್ಲ ಕಡೆ ಅಕ್ಕಿ ಖರೀದಿಯ ಪ್ರಯತ್ನ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಗ್ಯಾರಂಟಿ ಪ್ರಕಾರ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಎಫ್ಸಿಐ ಅಕ್ಕಿ ಕೊಡುತ್ತೇವೆ ಎಂದು ಜೂ.12ಕ್ಕೆ ಹೇಳಿದ್ದರು. ಜೂ.13 ಕ್ಕೆ ಕೊಡಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಅಕ್ಕಿ ಖರೀದಿಯ ಪ್ರಯತ್ನ ಮಾಡುತ್ತೇವೆ ಎಂದು ಮುನಿಯಪ್ಪ ನುಡಿದರು.
Next Story