ತೀವ್ರ ಜ್ವರ; ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯನ್ನು ಮಂಗಳವಾರ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ತುರ್ತು ನಿಗಾ ಘಟಕದಲ್ಲಿ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಇಂದು ವೈದ್ಯರು ವಾರ್ಡ್ ಗೆ ಸ್ಥಳಾಂತರಿಸಲಿದ್ದಾರೆ ಎಂದು ಮುಖ್ಯಮಂತ್ರಿಯ ಕಚೇರಿ ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಸಿಎಂ ದೆಹಲಿ ಪ್ರವಾಸದ ಸಮಯದಲ್ಲಿ ಕೊಂಚ ಬದಲಾವಣೆಯಾಗಿದೆ ಎಂದು ತಿಳಿದು ಬಂದಿದೆ.
Next Story