ಕಾಲೇಜಿನ ಕಾಂಪೌಂಡ್ನಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು
ದಾವಣಗೆರೆ: ಕಂಪೌಂಡ್ನಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಹರಿಹರ ತಾಲೂಕಿನ ಕುರುಬರಹಳ್ಳಿ ಸಮೀಪದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜಿನಲ್ಲಿ ವರದಿಯಾಗಿದೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದ ಶಶಿಕಾಂತ್ ಎಂಬುವರ ಪುತ್ರಿ ಸಿನಿಕ್ಷಾ (16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ರವಿವಾರ ರಾತ್ರಿ 11.30ಕ್ಕೆ ವಸತಿ ಕಾಲೇಜಿನ ಕಾಂಪೌಂಡ್ ಹತ್ತುವಾಗ ಜಾರಿ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗಿನ ಜಾವ ವಿದ್ಯಾರ್ಥಿನಿ ಮರಣಹೊಂದಿದರೆಂದು ಗ್ರಾಮಾಂತರ ಪೊಲೀಸರು ಮಾಹಿತಿ ನೀಡಿದ್ದಾರೆ.
2015ರ ಡಿ. 14ರಂದು ಇದೇ ವಿದ್ಯಾ ಸಂಸ್ಥೆಯಲ್ಲಿ ವಿಜಯಪುರ ಜಿಲ್ಲೆ ಸಿಂದಗಿ ನಿವಾಸಿ ಮಾಲಾಶ್ರೀ ಬಿರಾದರ್ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ನಡೆದಿತ್ತು. ವಿದ್ಯಾರ್ಥಿನಿಯ ಪೋಷಕರು ವಿದ್ಯಾಸಂಸ್ಥೆ ವಿರುದ್ಧ ದೂರು ಸಲ್ಲಿಸಿದ್ದರು. ಆಗಿನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಇವರು ಭೇಟಿ ನೀಡಿ ವಿದ್ಯಾಸಂಸ್ಥೆಯಲ್ಲಿನ ಲೋಪಗಳನ್ನು ಗಮನಿಸಿ ಸಂಸ್ಥೆ ಮುಖ್ಯಸ್ಥರಿಗೆ ತರಾಟೆ ತೆಗೆದುಕೊಂಡಿದ್ದರು.