ಶಿವಮೊಗ್ಗ | ಬಾಲಕನಿಗೆ ಬೈಕ್ ಚಲಾಯಿಸಲು ಅವಕಾಶ; ಮಾಲಕನಿಗೆ ಬಿತ್ತು 20 ಸಾವಿರ ರೂ. ದಂಡ
ಶಿವಮೊಗ್ಗ, ಜೂ.21: ಹೆಲ್ಮೆಟ್ ಧರಿಸದೆ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಪ್ರಕರಣದಲ್ಲಿ ನ್ಯಾಯಾಲಯ ಬೈಕ್ ಮಾಲಕನಿಗೆ 20 ಸಾವಿರ ರೂ. ದಂಡ ವಿಧಿಸಿದೆ.
17 ವರ್ಷದ ಯುವಕ ಹೆಲ್ಮೆಟ್ ಧರಿಸದೆ, ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ. ತೀರ್ಥಹಳ್ಳಿ ಪೊಲೀಸರು ಸೋಮವಾರ ತಪಾಸಣೆ ಮಾಡುವಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಸಂಚಾರ ನಿಯಮ ಉಲ್ಲಂಘನೆ, ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ್ದಕ್ಕೆ ಮಾಲಕ ಕಳ್ಳಿಗದ್ದೆ ಗ್ರಾಮದ ಪ್ರಮೋದ್ (25) ಎಂಬಾತನ ಮೇಲೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.
ತೀರ್ಥಹಳ್ಳಿಯ ಜೆಎಂಎಫ್ಸಿ ನ್ಯಾಯಾಲಯ ಬೈಕ್ ಮಾಲಕ ಪ್ರಮೋದ್ಗೆ 20 ಸಾವಿರ ರೂ. ದಂಡ ವಿಧಿಸಿದೆ.
Next Story