ಬರ, ಪ್ರವಾಹ ಮತ್ತು ನೈಸರ್ಗಿಕ ವಿಕೋಪ ನಿರ್ವಹಣೆಗೆ ಸಂಪುಟ ಉಪ ಸಮಿತಿ: ಸರಕಾರ ಆದೇಶ
ಬೆಂಗಳೂರು, ಜೂ. 22: ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳ ಪರಿಸ್ಥಿತಿಯನ್ನು ಪರಾಮರ್ಶಿಸಿ ಅದನ್ನು ಸಮರ್ಥವಾಗಿ ನಿರ್ವಹಿಸಲು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ.
ಕಂದಾಯ ಸಚಿವ ಕೃಷ್ಣಭೈರೇಗೌಡ ಈ ಉಪಸಮಿತಿಯ ಅಧ್ಯಕ್ಷರಾಗಿದ್ದು. ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಚಲುವರಾಯ ಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ್, ಕೆ.ಎನ್.ರಾಜಣ್ಣ ಉಪಸಮಿತಿಯ ಸದಸ್ಯರಾಗಿದ್ದಾರೆ.
ರಾಜ್ಯದಲ್ಲಿ ಬರ, ಪ್ರವಾಹ, ಇತರೆ ನೈಸರ್ಗಿಕ ವಿಕೋಪಗಳು ಉದ್ಭವಿಸಿದಾಗ ಪರಿಸ್ಥಿತಿಯನ್ನು ಮರಾಮರ್ಶಿಸಲು ಸಮರ್ಥವಾಗಿ ನಿಭಾಯಿಸಲು ನೀತಿ, ನಿರೂಪಣೆ ರೂಪಿಸಲು ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಣಯಿಸಲು ಅಥವಾ ಅಗತ್ಯ ನಿರ್ದೇಶನಗಳನ್ನು ನೀಡಲು ಈ ಸಚಿವ ಸಂಪುಟ ಉಪಸಮಿತಿ ರಚನೆಯ ಉದ್ದೇಶವಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story