ವಿಧಾನಸಭೆ ಚುನಾವಣೆಯಲ್ಲಿ ಕಳೆದುಕೊಂಡಿದ್ದನ್ನು ಲೋಕಸಭೆಯಲ್ಲಿ ಪಡೆಯುತ್ತೇವೆ: ಡಿ.ವಿ.ಸದಾನಂದ ಗೌಡ ವಿಶ್ವಾಸ
ಮೈಸೂರು: 'ವಿಧಾನಸಭೆ ಚುನಾವಣೆಯಲ್ಲಿ ಕಳೆದುಕೊಂಡಿದ್ದನ್ನು ಲೋಕಸಭೆಯಲ್ಲಿ ಪಡೆಯುತ್ತೇವೆ' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ರಾಜೇಂದ್ರ ಕಲಾಮಂದಿರದಲ್ಲಿ ಗುರುವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
''ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರಕಾರಗಳಿವೆ, ನಮಗೇ ಜನ ಮತ ಹಾಕುತ್ತಾರೆ ಎಂಬ ಅತಿಯಾದ ಆತ್ಮವಿಶ್ವಾಸದಲ್ಲಿ ಇದ್ದೆವು. ಆದರೆ, ಚುನಾವಣೆ ಫಲಿತಾಂಶದಿಂದ ಬುದ್ಧಿ ಕಲಿತಿದ್ದೇವೆ. ಪಕ್ಷ ಆಡಳಿತದಲ್ಲಿ ಇದ್ದಾಗ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂಬ ನೋವಿದೆ. ಅದನ್ನು ಮುಂದೆ ಸರಿಪಡಿಸುವ ಕೆಲಸ ಮಾಡುತ್ತೇವೆ'' ಎಂದು ಭರವಸೆ ನೀಡಿದರು.
''ಗೋಡೆಗಳಿಗೆ ಪಕ್ಷದ ಪೋಸ್ಟರ್ ಹಂಚುತ್ತಿದ್ದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಹಾಗೆಯೇ ನಿಮಗೂ ಅವಕಾಶ ಸಿಗಲಿದೆ'' ಎಂದು ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಿದರು.
Next Story